ನವಲಗುಂದ : ಕಳೆದ 17 ವರ್ಷಗಳ ವರೆಗೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ನವಲಗುಂದ ತಾಲೂಕಿನ ಬಳ್ಳೂರ ಗ್ರಾಮದ ಚನ್ನಬಸಯ್ಯ ಮಲ್ಲಯ್ಯ ಪೂಜಾರ ರವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಲಾಯಿತು.
ಶಿರಕೋಳ ಹಿರೇಮಠದ ಗುರುಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಅಮ್ಮಿನಬಾವಿಯ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಸಿ, ಅವರನ್ನು ಸನ್ಮಾನಿಸಲಾಯಿತು.
ಇನ್ನು ಈ ವೇಳೆ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ, ಜಿ.ಪಂ.ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಪಾಟೀಲ, ಸೇರಿದಂತೆ ಗ್ರಾಮಸ್ತರು ಭಾಗಿಯಾಗಿದ್ದರು.
Kshetra Samachara
08/02/2021 11:23 am