ಧಾರವಾಡ: ಫೆ.16 ರಂದು ಸಂಜೆ 4 ಕ್ಕೆ ಧಾರವಾಡದ ಪ್ರಸಿದ್ಧ ಮುರುಘಾಮಠದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದ ಅಂಗವಾಗಿ ಫೆ.7 ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಿವೆ. ಫೆ.15 ರಂದು ಡಂಬಳ-ಗದಗದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿಗಳಿಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 25 ಸಾವಿರ ನಗದು ಹಾಗೂ 10 ಗ್ರಾಂ ತೂಕದ ಚಿನ್ನದ ಮಹಾಂತಪ್ಪಗಳ ಮೂರ್ತಿಯನ್ನು ಒಳಗೊಂಡಿದೆ ಎಂದರು.
ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ವಿವಿಧ ಜನಪ್ರತಿನಿಧಿಗಳು ಹಾಗೂ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದರು.
Kshetra Samachara
10/02/2021 01:17 pm