ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಅದ್ಧೂರಿ ಶಿವಾಜಿ ಜಯಂತಿ

ಧಾರವಾಡ: ಹಿಂದೂ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಧಾರವಾಡದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.ಮರಾಠಾ ವಿದ್ಯಾಪ್ರಸಾರಕ ಮಂಡಳದ ವತಿಯಿಂದ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಪಾಲ್ಗೊಂಡಿದ್ದರು.

ಧಾರವಾಡದ ಶಿವಾಜಿ ಮೂರ್ತಿ ಇಂದು ಅಕ್ಷರಶಃ ಕಂಗೊಳಿಸುತ್ತಿತ್ತು. ಶಿವಾಜಿ ಜಯಂತಿ ಅಂಗವಾಗಿ ಶಿವಾಜಿ ವೃತ್ತವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.

ಶಿವಾಜಿ ವೃತ್ತದಿಂದ ಆರಂಭವಾದ ಭವ್ಯ ಮೆರವಣಿಗೆ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಪುಟಾಣಿಗಳು ಶಿವಾಜಿ ವೇಷ ಧರಿಸಿ ಗಮನಸೆಳೆದರು. ಟ್ರ್ಯಾಕ್ಟರ್ ಹಾಗೂ ಇತರ ವಾಹನಗಳ ಮೇಲೆ ಶಿವಾಜಿ ಮೂರ್ತಿ ಹಾಗೂ ಫೋಟೋಗಳನ್ನಿಟ್ಟು ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ಧಕ್ಕೂ ಜೈ ಶಿವಾಜಿ.. ಜೈ ಭವಾನಿ ಎಂಬ ಘೋಷಣೆಗಳು ಮೊಳಗಿದವು.

ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಸೇರಿದಂತೆ ಮರಾಠಾ ಸಮಾಜದ ಮುಖಂಡರ ನೇತೃತ್ವದಲ್ಲಿ ಈ ಮೆರವಣಿಗೆ ಕಾರ್ಯಕ್ರಮ ನಡೆಯಿತು.

Edited By : Manjunath H D
Kshetra Samachara

Kshetra Samachara

19/02/2021 05:58 pm

Cinque Terre

36.95 K

Cinque Terre

1

ಸಂಬಂಧಿತ ಸುದ್ದಿ