ಕುಂದಗೋಳ : ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇಯ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಯಿತು.
ಛತ್ರಪತಿ ಶಿವಾಜಿ ಮಹಾರಾಜರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಂತ್ರ ಪಠನೆ ಗೈದು ನೆರೆದ ಜನರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಪೂಜಾ ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ವೇಷ ಧರಿಸಿದ ನಾಗರೀಕರೊಬ್ಬರು ಗಮನ ಸೆಳೆದರು.
ಈ ಸಂದರ್ಭದಲ್ಲಿ ತಾಲೂಕು ಆಡಳಿತದ ಸಿಬ್ಬಂದಿಗಳು ಹಾಗೂ ಪಟ್ಟಣ ಪಂಚಾಯಿತಿ ಸರ್ವ ಸದಸ್ಯರು ಪಟ್ಟಣದ ಮರಾಠಾ ಸಮಾಜದವರು ಕುಂದಗೋಳ ಪಟ್ಟಣದ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
19/02/2021 09:58 pm