ಲಕ್ಷ್ಮೇಶ್ವರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 73 ನೇ ಜನ್ಮ ದಿನವನ್ನು ಲಕ್ಷ್ಮೇಶ್ವರ ಹಾಗೂ ಗದಗ ಜಿಲ್ಲೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಸಿದ್ದರಾಮಯ್ಯ ಅವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ವಿವಿಧ ಸಮಾಜ ಸೇವಾ ಕಾರ್ಯವನ್ನು ನಡೆಸುವ ಮೂಲಕ ಅವರ ಅಭಿಮಾನಿಗಳು ಅರ್ಥ ಪೂರ್ಣವಾಗಿ ಆಚರಿಸಿದರು.
ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಸರಕಾರಿ ಆಸ್ಪತ್ರೆಗೆ ದಾಖಲಾದ ಎಲ್ಲಾ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ ಸೇರಿದಂತೆ ವಿವಿಧ ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ನಾಯಕನ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಿ, ಜೈಕಾರ ಹಾಕಿದರು.
ಇದೇ ವೇಳೆ ನೀಲಪ್ಪ ಪಡಗೇರಿ ಮಾತನಾಡಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವಧಿಯಲ್ಲಿ ಅತ್ಯುತ್ತಮವಾದ ಆಡಳಿತ ನಡೆಸಿ, ದೇಶದ ಗಮನ ಸೆಳೆದಿದ್ದಾರೆ. ಯಾವುದೇ ತಾರತಮ್ಯ ನೀತಿ ಅನುಸರಿದೆ ಎಲ್ಲಾ ವರ್ಗದ, ಎಲ್ಲಾ ಪ್ರದೇಶಗಳ ಅಭಿವೃದ್ಧಿಗೆ ಶ್ರಮಿಸಿದ್ದರು. ಅನ್ನಭಾಗ್ಯದಂತಹ ಯೋಜನೆಯನ್ನು ಅನುಷ್ಠಾನಗೊಳಿಸಿ ಹಸಿವು ಮುಕ್ತ ಕರ್ನಾಟಕವನ್ನಾಗಿ ಮಾಡಿದ ಕೀರ್ತಿ ತನ್ನದಾಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಇನ್ನಷ್ಟು ಕೀರ್ತಿ ಲಭಿಸಲೆಂದು ಪ್ರಾರ್ಥಿಸಿದ್ದೇವೆ ಎಂದರು.
Kshetra Samachara
12/08/2021 07:27 pm