ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಹುಬ್ಬಳ್ಳಿ- ಐತಿಹಾಸಿಕ ಈದ್ಗಾ ಮೈದಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಾಲಿಕೆ ಆಯುಕ್ತ ಸುರೇಶ ಹಿಟ್ನಾಳ ಧ್ವಜಾರೋಹಣ ನೆರವೇರಿಸಿದರು.

ಕೋವಿಡ್ ಮೂರನೇ ಅಲೆ ಭೀತಿಯ ಮಧ್ಯೆಯೇ ಸರ್ಕಾರದ ಮಾರ್ಗಸೂಚಿಯಂತೆ, ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಎಂ.ಡಿ ಶಕೀಲ್ ಅಹ್ಮದ್, ಪಾಲಿಕೆ ಮಾಜಿ ಸದಸ್ಯರಾದ ಶಿವು ಮೆಣಸಿನಕಾಯಿ, ರಾಜಣ್ಣ ಕೊರವಿ ಸೇರಿದಂತೆ ಮತ್ತಿತರರು ಧ್ವಜಾರೋಹಣದಲ್ಲಿ ಪಾಲ್ಗೊಂಡಿದ್ದರು.

ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕಾರಿಗಳು ಹಾಗೂ ಗಣ್ಯರು ಗೌರವ ಸರ್ಮಪಿಸಿದರು.

Edited By : Nagesh Gaonkar
Kshetra Samachara

Kshetra Samachara

15/08/2021 09:32 am

Cinque Terre

19.64 K

Cinque Terre

0

ಸಂಬಂಧಿತ ಸುದ್ದಿ