ಕಲಘಟಗಿ:ದೇಶ ಪ್ರಗತಿ ಪಥದಲ್ಲಿದ್ದು ದೇಶದ ಪ್ರಗತಿಯಲ್ಲಿ ಜನರ ಪರಿಶ್ರಮ ಬಹುಮುಖ್ಯವಾಗಿದೆ ಎಂದು ಶಾಸಕ ಸಿ.ಎಂ ನಿಂಬಣ್ಣವರ ನುಡಿದರು.
ಅವರು ಪಟ್ಟಣದ ಸರಕಾರಿ ಮಾದರಿ ಶಾಲೆಯಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ, ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರದ ಅಧ್ಯಕ್ಷತೆವಹಿಸಿ ಮಾತನಾಡಿ,ಮಹಾನ ನಾಯಕರ ತ್ಯಾಗ ಮತ್ತು ಬಲಿದಾನಗಳಿಂದ ದೇಶದ ಜನತೆಗೆ ಸ್ವಾತಂತ್ರ ಲಭ್ಯವಾಯಿತು. ಆದ ಕಾರಣ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹಾಗೂ ಹೋರಾಡಿದ ಮಹನೀಯರನ್ನು ಸ್ಮರಿಸಬೇಕು ಎಂದು ನುಡಿದರು.
ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಇಲಾಖೆಯ ಸಿಬ್ಬಂದಿ ಧ್ವಜ ವಂದನೆ ಸಲ್ಲಿಸಿದರು.
Kshetra Samachara
15/08/2021 09:16 pm