ಹುಬ್ಬಳ್ಳಿ- ಶಿವ ಸಂಸ್ಕೃತಿಯ ಮೂಲಪುರುಷ ಶ್ರೀ ವೀರಭದ್ರ ಸ್ವಾಮಿಯ ಜಯಂತೋತ್ಸವವನ್ನು, ಸೆಪ್ಟೆಂಬರ್ 14 ರಂದು ರಾಷ್ಟ್ರವ್ಯಾಪಿಯಾಗಿ ಏಕಕಾಲಕ್ಕೆ ಆಚರಿಸಬೇಕೆಂದು ವೀರಶೈವ- ಲಿಂಗಾಯತ ಸಂಘಟನಾ ವೇದಿಕೆ ಮತ್ತು ಕರ್ನಾಟಕ ರಾಜ್ಯ ಶ್ರೀ ವೀರಭದ್ರೇಶ್ವರ ಪ್ರಚಾರ ಸಮಿತಿಗಳು ಜಂಟಿಯಾಗಿ ಕರೆ ನೀಡಿದೆ ಎಂದು
ರಾಜ್ಯ ಸಂಚಾಲಕ ಗಿರೀಶಕುಮಾರ ಬುಡರಕಟ್ಟಿಮಠ ಹೇಳಿದರು.
ಇನ್ನು, ಸೆಪ್ಟೆಂಬರ್ 14 ರಂದು ಸಂಜೆ 5 ಗಂಟೆಗೆ ರಾಷ್ಟ್ರಮಟ್ಟದ ಶ್ರೀ ವೀರಭದ್ರೇಸ್ವಾಮಿ ಜಯಂತಿ ಮಹೋತ್ಸವವನ್ನು ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಜಯಂತಿಗೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನಿಧ್ಯ ವಹಿಸಲಿದ್ದಾರೆ. ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದಾರೆ. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರಾಧ್ಯಕ್ಷ ಪ್ರದೀಪ ಕಂಕಣವಾಡಿ, ಕರ್ನಾಟಕ ರಾಜ್ಯ ಶ್ರೀವೀರಭದ್ರೇಶ್ವರ ಪ್ರಾಚಾರ ಸಮಿತಿ ರಾಜ್ಯಾಧ್ಯಕ್ಷ ಸಿ.ಎಂ.ಶಿವಕಿರಣ ಕಲಬುರಗಿ ಸೇರಿದಂತೆ ವಿವಿಧ ರಾಜ್ಯಗಳ ಮಠಾಧೀಶರು, ವೀರಶೈವ ಲಿಂಗಾಯತ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
Kshetra Samachara
11/09/2021 08:05 pm