ಅಣ್ಣಿಗೇರಿ : ಜನಸಂಘದ ಸಂಸ್ಥಾಪಕ ಹಾಗೂ ಬಿಜೆಪಿಯ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ 105ನೇ ಜನ್ಮದಿನಾಚರಣೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಬಿಜೆಪಿ ಪಕ್ಷಕ್ಕಾಗಿ ಸಾಕಷ್ಟು ಸಹಾಯ ಸಹಕಾರವನ್ನು ನೀಡಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿಯೇ ಪ್ರಧಾನಿ ಮೋದಿಯವರು ದೇಶವನ್ನು ಮುನ್ನಡೆಸಿಕೊಂಡು ಸಾಗುತ್ತಿದ್ದಾರೆ. ಪ್ರತಿ ಹಳ್ಳಿ ಹಳ್ಳಿಗೂ ಸರ್ಕಾರದ ಸೇವೆಯನ್ನು ಮುಟ್ಟಿಸುವಲ್ಲಿ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದೆ. ರೈತರಿಗಾಗಿ ಅತೀ ಹೆಚ್ಚಿನ ಬೆಂಬಲ ಬೆಲೆಯನ್ನು ಘೋಷಣೆ ಮಾಡುವ ಮೂಲಕ ರೈತರ ಆರ್ಥಿಕತೆಯನ್ನು ಬಲಪಡಿಸುತ್ತಿರುವ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್, ಮುಖಂಡರಾದ ಷಣ್ಮುಖ ಗುರಿಕಾರ, ಶಿವಯೋಗಿ ಸುರಕೋಡ, ಶಿವಾನಂದ ಹೊಸಳ್ಳಿ, ಬಸವರಾಜ ಕುಂದಗೋಳಮಠ,ಶರಣಪ್ಪ ಗೌಡ್ರು ದಾನಪ್ಪಗೌಡ್ರ, ಚಂಬಣ್ಣ ಸುರಕೋಡ , ಜಗದೀಶ್ ಅಬ್ಬಿಗೇರಿಮಠ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
25/09/2021 09:59 pm