ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮಾಜ ಕಲ್ಯಾಣ ಇಲಾಖೆ 45 ಹಾಸ್ಟೆಲುಗಳಲ್ಲಿ ಸ್ವಚ್ಛತೆ ಶ್ರಮದಾನ

ಹುಬ್ಬಳ್ಳಿ- ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ನಿರ್ವಹಣೆಯಾಗುತ್ತಿರುವ ಎಲ್ಲ 45 ವಸತಿ ಶಾಲೆ , ವಿದ್ಯಾರ್ಥಿ ನಿಲಯಗಳು ಹಾಗೂ ಕಾರ್ಯಾಲಯಗಳಲ್ಲಿ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆ ಹಾಗೂ ಶ್ರಮದಾನ ಕಾರ್ಯಕ್ರಮ ಜರುಗಿತು.

ಹುಬ್ಬಳ್ಳಿಯ ಘಂಟಿಕೇರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಇಂದು ಜಿಲ್ಲೆಯ ನೋಡಲ್ ಅಧಿಕಾರಿಯಾಗಿರುವ , ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಹೆಚ್.ನಟರಾಜ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ ಅವರು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರಮದಾನ ಕಾರ್ಯಕ್ಕೆ ಚಾಲನೆ ನೀಡಿದರು.

ಇಲಾಖೆಯ ಸಹಾಯಕ ನಿರ್ದೇಶಕರು,ಅಧಿಕಾರಿಗಳು,ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

02/10/2021 11:35 am

Cinque Terre

9.21 K

Cinque Terre

0

ಸಂಬಂಧಿತ ಸುದ್ದಿ