ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹುಬ್ಬಳ್ಳಿ ವಿದ್ಯಾನಗರದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಷ್ಟು ಮುಖ್ಯವೋ ಅದೇ ರೀತಿ ಮಾಧ್ಯಮ ಕೂಡ ಅಷ್ಟೇ ಮುಖ್ಯವಾಗಿದೆ. ಅಲ್ಲದೇ ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕಾರ್ಯನಿರ್ವಹಿಸುವ ಪತ್ರಕರ್ತರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.
ಇನ್ನೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸಿಎ ಸೈಟ್ ನೀಡುವ ಭರವಸೆ ನೀಡುವ ಮೂಲಕ ಪತ್ರಕರ್ತರ ಬೇಡಿಕೆಗಳಿಗೆ ಸ್ಪಂದಿಸುವ ವಿಶ್ವಾಸವನ್ನು ಸಚಿವ ಮುನೇನಕೊಪ್ಪ ವ್ಯಕ್ತಪಡಿಸಿದರು.
ಬಳಿಕ ಸಾಧನೆ ಮಾಡಿದ ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮಕ್ಕೆ ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಸಿಎಂ ಮಾಧ್ಯಮ ಸಲಹೆಗಾರರಾದ ಗುರಲಿಂಗಸ್ವಾಮಿ ಹೊಳಿಮಠ ಸೇರಿದಂತೆ ಇತರರು ಆಗಮಿಸಿ ಪತ್ರಕರ್ತರ ಕಾರ್ಯವನ್ನು ಕೊಂಡಾಡಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣಪತಿ ಗಂಗೊಳ್ಳಿಯವರು ವಹಿಸಿದ್ದು, ಕಾರ್ಯಕ್ರಮದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.
Kshetra Samachara
10/10/2021 07:47 pm