ಧಾರವಾಡ: ಕರ್ನಾಟಕ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಧಾರವಾಡದ ರಂಗಾಯಣದಲ್ಲಿ ಶ್ರೀ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ವತಿಯಿಂದ ಗೀತ-ಗಾಯನ ಹಾಗೂ ನೃತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಡಾ.ಬಸ್ಸು ಬೇವಿನಗಿಡದ ಉದ್ಘಾಟಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ನಿರ್ದೇಶಕ ಶರಣು ಅಂಗಡಿ, ಕಾಲೇಜಿನ ಸಂಸ್ಥಾಪಕರಾದ ಡಾ.ವೀಣಾ ಬಿರಾದಾರ, ಪ್ರಾಚಾರ್ಯ ಪ್ರೊ.ನಾಗರಾಜ ಶಿರೂರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನಂತರ ನಡೆದ ಗೀತ-ಗಾಯನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಾಡು, ನುಡಿಗೆ ಸಂಬಂಧಿಸಿದ ಗೀತೆಗಳನ್ನು ಹಾಡಿ ಗಮನಸೆಳೆದರು. ಅಲ್ಲದೇ ನಾಡು-ನುಡಿಗೆ ಸಂಬಂಧಿಸಿದಂತೆಯೇ ನೃತ್ಯಗಳನ್ನು ಮಾಡಿ ಕಾರ್ಯಕ್ರಮದ ಮೆರಗು ಹೆಚ್ಚಿಸಿದರು. ಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪಾಂಡಿತ್ಯ ಪ್ರದರ್ಶಿಸಿದರು.
2021-22ನೇ ಸಾಲಿನ ಅರ್ಹತಾ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಪ್ರಥಮ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೇ ರಾಜ್ಯಮಟ್ಟದ ಟೆಕ್ವಾಂಡೊ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದ ಕಾಲೇಜಿನ ವಿದ್ಯಾರ್ಥಿ ಸಾಯಿರಾಜ್‌ನನ್ನು ಸನ್ಮಾನಿಸಲಾಯಿತು.
ಇದೇ ಕಾರ್ಯಕ್ರಮದಲ್ಲಿ ಕನ್ನಡದ ಚಿತ್ರರಂಗದ ಯುವರತ್ನ ದಿ.ಪುನೀತ್ ರಾಜಕುಮಾರ್ ಅವರಿಗೂ ಶ್ರದ್ಧಾಂಜಲಿ ಸಲ್ಲಿಸಲಾಯಿತು.
Kshetra Samachara
21/11/2021 05:51 pm