ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೈಋತ್ಯ ರೈಲ್ವೆ ವಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 65ನೇ ಮಹಾಪರಿನಿರ್ವಾಣ ದಿನ ಆಚರಣೆ

ಹುಬ್ಬಳ್ಳಿ: ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವನ್ನು ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಕೇಂದ್ರ ಕಚೇರಿ, ರೈಲ್ ಸೌಧದಲ್ಲಿಂದು ಆಚರಿಸಲಾಯಿತು.

ಈ ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ ಅವರು, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿದರು. ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ರಾಷ್ಟ್ರದ ಅಭಿವೃದ್ಧಿಗಾಗಿ ಅಳವಡಿಸಿಕೊಳ್ಳಬೇಕು ಎಂದು ಸಿಬ್ಬಂದಿಗಳಲ್ಲಿ ಮನವಿ ಮಾಡಿಕೊಂಡರು.

ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ ಪ್ರಶಾಂತ್ ಕುಮಾರ್ ಮಿಶ್ರಾ, ಕೇಂದ್ರ ಕಚೇರಿಯ ಎಲ್ಲಾ ಇಲಾಖೆ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಹಾಗೂ ನೈಋತ್ಯ ರೈಲ್ವೆಯ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

Edited By : Nagaraj Tulugeri
Kshetra Samachara

Kshetra Samachara

06/12/2021 06:36 pm

Cinque Terre

8.28 K

Cinque Terre

0

ಸಂಬಂಧಿತ ಸುದ್ದಿ