ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಪೇಜಾವರ ಶ್ರೀ ವಿಶ್ವೇಶ ತೀರ್ಥ ನಮನ' ; ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಕಲ್ಕೂರ ಪ್ರತಿಷ್ಠಾನ ವತಿಯಿಂದ ಕದ್ರಿಯಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ನಮನ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಹರಿಪಾದಗೈದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾದುಕೆ ಹಾಗೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ,

ಗುರುಗಳಾದ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಯವರು ಸ್ವಾರ್ಥ ಬದಿಗೊತ್ತಿ, ತಪಸ್ಸಿನೋಪಾದಿಯಲ್ಲಿ ಬದುಕಿದವರು. ಲೋಕಹಿತಕ್ಕಾಗಿ ಅಹರ್ನಿಶಿ ದುಡಿದವರು ಎಂದು ಹೇಳಿದರು.

ಪುತ್ತಿಗೆ ಶ್ರೀ ಸುಗುಣೇಂದ್ರ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಶಾಸಕ ವೇದವ್ಯಾಸ ಕಾಮತ್, ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಲಕ್ಷ್ಮಿ ನಾರಾಯಣ ಆಸ್ರಣ್ಣ, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

29/12/2021 10:51 pm

Cinque Terre

53.2 K

Cinque Terre

0

ಸಂಬಂಧಿತ ಸುದ್ದಿ