ಕುಂದಗೋಳ : ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಹಲವಾರು ಯುವಕ ಯುವತಿಯರು ಸಂದರ್ಶನದಲ್ಲಿ ಪಾಲ್ಗೊಂಡರು.
ಹೌದು ! ಸ್ವಾಮಿ ವಿವೇಕಾನಂದರ ಜನ್ಮದಿನ ಹಾಗೂ ರಾಷ್ಟ್ರೀಯ ಯವ ದಿನೋತ್ಸವದ ಅಂಗವಾಗಿ ಚಾಣಾಕ್ಷ ಸ್ಟೆಪ್ಸ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಡಾ.ಎ.ಸಿ.ವಾಲಿ ಗುರುಗಳು ನೇತೃತ್ವದಲ್ಲಿ ಬಿಜೆಪಿ ಮುಖಂಡರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ನಡೆದ ಉದ್ಯೋಗ ಮೇಳದಲ್ಲಿ ಹುಬ್ಬಳ್ಳಿ ಧಾರವಾಡ ಬೆಂಗಳೂರಿನ ವಿವಿಧ ಕಂಪನಿಗಳು ಪಾಲ್ಗೊಂಡು ಯುವಕ ಯುವತಿಯರ ಸಂದರ್ಶನ ಎದುರಿಸಿದರು, ಅರ್ಹ ಯುವಕ ಯುವತಿಯರಿಗೆ ಕಂಪನಿಗಳು ಉದ್ಯೋಗ ನೀಡುವ ಭರವಸೆ ನೀಡಿದವು. ಇನ್ನೂ ಸಧ್ಯ ಬಿಎ, ಬಿಕಾಂ, ಬಿಎಸ್ಸಿ ವ್ಯಾಸಾಂಗ ಮಾಡುತ್ತಿರುವ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಹ ಈ ಉದ್ಯೋಗ ಮೇಳಕ್ಕೆ ಹಾಜರಾಗಿದ್ದರು.
Kshetra Samachara
13/01/2022 06:44 pm