ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : 73ನೇ ಗಣರಾಜ್ಯೋತ್ಸವ ಸಂಭ್ರಮ ಅವಿಸ್ಮರಣೀಯ

ಕುಂದಗೋಳ : 73ನೇ ಗಣರಾಜ್ಯೋತ್ಸವದ ಸಂಭ್ರಮ ಕುಂದಗೋಳ ತಾಲೂಕಿನಲ್ಲಿ ಅತಿ ಅದ್ದೂರಿಯಾಗಿ ಧ್ವಜಾರೋಹಣಕ್ಕೆ ಸಾಕ್ಷಿಯಾಯಿತು.

ಹೌದು ! ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿ ತಹಶೀಲ್ದಾರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಸಂವಿಧಾನ ಕುರಿತು ಮಾತನಾಡಿದರು, ಬಳಿಕ ಬೆಟದೂರಿನ ದಿ.ವೀರಯೋಧ ಲಯನ್ಸ್ ನಾಯಕ ಹಣುಮಂತಪ್ಪ ಕೊಪ್ಪದ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಯರಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉರ್ದು ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಶಾಲೆಗೆ ಕೊಡುಗೆ ನೀಡಿದರು.

ಅದರಂತೆ ಕುಂದಗೋಳ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ಪ್ರಕಾಶ್ ಕೋಕಾಟೆ 73ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

ಇನ್ನೂ ಗುಡೇನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1980 ರಿಂದ 2022 ರ ವರೆಗೆ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ಅಭಿವೃದ್ಧಿಗೆ ದೇಣಿಗೆ ನೀಡಿದವರಿಗೆ ಗಣರಾಜ್ಯೋತ್ಸವದ ದಿನ ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಯಿತು.

ದೇವನೂರಿನಲ್ಲಿ ಗಣರಾಜ್ಯೋತ್ಸವ ಸಮಾರಂಭ ಅಂಗವಾಗಿ ಕಿಮ್ಸ್ ರಕ್ತ ಭಂಡಾರ ಸಂವೃಕ್ಷ ಸಂಘದಿಂದ "ರಕ್ತದ ಹನಿ ಕೊಟ್ಟವನೇ ಧನಿ" ಎಂಬ ಘೋಷಣೆಯೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ರಾಚೋಟೇಶ್ವರ ಶ್ರೀಗಳಿಂದ ಉದ್ಘಾಟಿಸಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ಹಾಗೂ ಸಸಿಗಳನ್ನು ವಿತರಿಸಲಾಯಿತು.

ಅದರಂತೆ ವಿವಿಧ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲಿ, ಅಂಗನವಾಡಿ ಕೇಂದ್ರ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ, ಸರ್ಕಾರಿ ಇಲಾಖೆಗಳಲ್ಲಿ 73ನೇ ಗಣರಾಜ್ಯೋತ್ಸವದ ಸೊಬಗು ಮೊಳಗಿತು.

ಶ್ರೀಧರ ಪೂಜಾರ ಪಬ್ಲಿಕ್ ನೆಕ್ಸ್ಟ್

Edited By : Nagesh Gaonkar
Kshetra Samachara

Kshetra Samachara

26/01/2022 09:37 pm

Cinque Terre

34.72 K

Cinque Terre

0

ಸಂಬಂಧಿತ ಸುದ್ದಿ