ನವಲಗುಂದ : ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನವಲಗುಂದ ಪಟ್ಟಣದ ಉರ್ದು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್ ಮಾಯಾಚಾರಿ ಅವರು ಚಾಲನೆ ನೀಡಿದರು.
ಇನ್ನು ಕರ್ನಾಟಕ ಪಿಂಜಾರ್ ನದಾಫ್ ಮನ್ಸುರಿ ಸಂಘಗಳ ಮಹಾಮಂಡಳ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉರ್ದು ಪ್ರೌಢ ಶಾಲೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಹಿಳೆಯರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್ ಮಾಯಾಚಾರಿ ಅವರಿಗೆ ಸನ್ಮಾನಿಸಲಾಯಿತು.
Kshetra Samachara
08/03/2022 03:23 pm