ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಹಿಳಾ ಸಮಾನತೆ ನಿತ್ಯಜೀವನದ ಆಚರಣೆಯಾಗಲಿ: ಡಿಸಿ

ಧಾರವಾಡ: ಮಹಿಳಾ ದಿನವು ಮಾರ್ಚ್ 8ರ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗದೇ, ಪ್ರತಿದಿನ ಮಹಿಳಾ ಸಮಾನತೆಯ ಆಚರಣೆ ಜಾರಿಯಲ್ಲಿರಬೇಕು. ಶಾಲೆ ಕಾಲೇಜುಗಳ ಶಿಕ್ಷಣ, ಫಲಿತಾಂಶಗಳಲ್ಲಿ ಬಾಲಕಿಯರೇ ಮೇಲುಗೈ ಸಾಧಿಸುತ್ತಾರೆ. ಆದರೆ, ಮುಂದೆ ಉದ್ಯೋಗಶೀಲರನ್ನಾಗಿಸಿ ಅವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಪ್ರೋತ್ಸಾಹದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಸಹಯೋಗದಲ್ಲಿ ಡಾ.ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸ್ತ್ರೀಶಕ್ತಿ ಸಂಘದ ಸದಸ್ಯರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಂ.ಪುಷ್ಪಲತಾ ಮಾತನಾಡಿ, ಮಹಿಳೆಯರು ಪ್ರತಿನಿತ್ಯ ಮನೆಯ ಒಳಗೆ ಮತ್ತು ಸಮಾಜದ ಅಂಗಳದಲ್ಲಿ ಹೋರಾಡುತ್ತಿದ್ದಾರೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಎರಡು ಪಟ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ವರದಕ್ಷಿಣೆ ಮತ್ತಿತರ ಪಿಡುಗಗಳ ಹಿಂದೆ ಮಹಿಳೆಯರೂ ಕೂಡ ಇರುವುದು ವಾಸ್ತವ, ಈ ಧೋರಣೆ ಬದಲಾಗಿ, ಪರಿವರ್ತನೆ ಬರಬೇಕು. ಒಬ್ಬ ಹೆಣ್ಣು ಮತ್ತೊಬ್ಬ ಸ್ತ್ರೀಯನ್ನು ಪ್ರೋತ್ಸಾಹಿಸುವ ಮನೋಭಾವ ಕುಟುಂಬಗಳಲ್ಲಿ ಬೆಳೆಯಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸ್ತ್ರೀ ಶಕ್ತಿ ಒಕ್ಕೂಟದ ಪದಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು, ಬ್ಯಾಂಕ್ ಸಖಿಯರು ಹಾಗೂ ಕಲೆ, ಕ್ರೀಡೆ, ವಿಜ್ಞಾನ, ಸಾಮಾನ್ಯ ಜ್ಞಾನ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದವರನ್ನು ಸನ್ಮಾನಿಸಿ, ಗೌರವಿಸಲಾಯಿತು.

Edited By : Manjunath H D
Kshetra Samachara

Kshetra Samachara

08/03/2022 08:58 pm

Cinque Terre

14.29 K

Cinque Terre

0

ಸಂಬಂಧಿತ ಸುದ್ದಿ