ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಡಾ.ಬಾಬು ಜಗಜೀವನ್ ರಾಮ್ ಅವರ 115 ನೇ ಜನ್ಮ ದಿನಾಚರಣೆಯನ್ನು ಎಪ್ರೀಲ್ 5 ರಂದು ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 131 ನೇ ಜನ್ಮ ದಿನಾಚರಣೆಯನ್ನು ಎಪ್ರೀಲ್ 14 ರಂದು ಆಚರಿಸಲಾಗುವುದು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಜಿಲ್ಲಾ ಹಂತದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಾರ್ಚ್ 18 ರೊಳಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ ಕಛೇರಿಗೆ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ಅವರು ಪ್ರಕಟಣೆ ತಿಳಿಸಿದ್ದಾರೆ.

Edited By :
Kshetra Samachara

Kshetra Samachara

15/03/2022 10:51 pm

Cinque Terre

8.31 K

Cinque Terre

0

ಸಂಬಂಧಿತ ಸುದ್ದಿ