ಧಾರವಾಡ: 14ನೇ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಅಧಿಕೃತವಾಗಿ ಚಾಲನೆ ದೊರೆತಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನೇಮಕಗೊಂಡಿರುವ ಡಾ.ರಮಾಕಾಂತ ಜೋಶಿ ಅವರನ್ನು ಭವ್ಯ ಮೆರವಣಿಗೆ ಮೂಲಕ ಸಮ್ಮೇಳದ ಮುಖ್ಯ ವೇದಿಕೆಗೆ ಕರೆತರಲಾಯಿತು.
ಧಾರವಾಡದ ಕೆಸಿಸಿ ಬ್ಯಾಂಕ್ ವೃತ್ತದಿಂದ ಆರಂಭವಾದ ಸರ್ವಾಧ್ಯಕ್ಷರ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಮಹಿಳಾ ಡೊಳ್ಳು ಕುಣಿತ, ಬೊಂಬೆ ಕುಣಿತ, ಕರಡಿ ಮಜಲಿನ ಮೇಳದವರು ಪಾಲ್ಗೊಂಡು ಮೆರವಣಿಗೆಯ ಮೆರಗು ಹೆಚ್ಚಿಸಿದರು.
ಮೆರವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/03/2022 11:30 am