ಧಾರವಾಡ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡದಲ್ಲಿ ಭವ್ಯ ಮೆರವಣಿಗೆ ನಡೆಯಿತು.
ಬೆಳಿಗ್ಗೆಯಿಂದಲೇ ಅಂಬೇಡ್ಕರ್ ಮೂರ್ತಿಗೆ ಜನ ತಂಡೋಪತಂಡವಾಗಿ ಬಂದು ಮಾಲಾರ್ಪಣೆ ಮಾಡಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅಮೃತ ದೇಸಾಯಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬುರಾಮ್, ಪಾಲಿಕೆ ಆಯುಕ್ತ ಗೋಪಾಲಕೃಷ್ಣ, ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸೇರಿದಂತೆ ಅನೇಕರು ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಇದಕ್ಕೂ ಮುನ್ನ ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಜಾಂಜ್ ಮೇಳ, ಚಂಡೆ ವಾದನ, ಹೆಜ್ಜೆ ಮೇಳದವರು ಪಾಲ್ಗೊಂಡು ಮೆರವಣಿಗೆಯ ಮೆರಗು ಹೆಚ್ಚಿಸಿದರು. ಅಂಬೇಡ್ಕರ್ ಜಯಂತಿ ಅಂಗವಾಗಿ ಸಾರ್ವಜನಿಕರಿಗೆ ಉಚಿತವಾಗಿ ಮಜ್ಜಿಗೆಯನ್ನೂ ವಿತರಿಸಲಾಯಿತು.
Kshetra Samachara
14/04/2022 01:28 pm