ಕುಂದಗೋಳ: ಕಳೆದ ಹಲವಾರು ದಿನಗಳಿಂದ ಕುಂದಗೋಳ ತಾಲೂಕಿನಾದ್ಯಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಮೆರವಣಿಗೆ ನಡೆಯುತ್ತಿವೆ. ಈ ಜಯಂತಿ ಆಚರಣೆ ಕೇವಲ ಒಂದು ದಿನಕ್ಕೆ ಸಿಮೀತ ಬೇಡಾ ನಿತ್ಯ ಡಾ.ಬಿರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ನಮ್ಮ ಬೆಳಗನ್ನು ಆರಂಭಿಸೋಣ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕೊಪ್ಪದ ಹೇಳಿದರು.
ಅವರು ಕುಂದಗೋಳ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತಿ ಕಾರ್ಯಕ್ರಮ ಹಾಗೂ ಮೆರವಣಿಗೆಯನ್ನು ವಿವಿಧ ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಿ ಮಾತನಾಡಿ, ನಾನೊಬ್ಬ ರೈತನ ಮಗ, ನನಗೆ ನಿಮಗೆ ಎಲ್ಲರಿಗೂ ಅಂಬ್ಕೇಡರ್ ಬರೆದ ಸಂವಿಧಾನ ಮಾರ್ಗದರ್ಶಿ ಎಂದರು.
ಬಳಿಕ ಸುಲ್ತಾನಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಜೆ.ಡಿ.ಘೋರ್ಪಡೆ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮುತ್ತಣ್ಣ, ಬಿಜೆಪಿ ಮುಖಂಡ ಮಾಲತೇಶ್ ಶ್ಯಾಗೋಟಿ, ದೃತಿ ಸಾಲ್ಮನಿ ಸೇರಿದಂತೆ ಹಲವಾರು ಗಣ್ಯರು ಹಾಗೂ ಸುಲ್ತಾನಪುರದ ಅಂಬೇಡ್ಕರ್ ಅಭಿಮಾನಿಗಳು ಉಪಸ್ಥಿತರಿದ್ದರು.
Kshetra Samachara
28/04/2022 06:29 pm