ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಹೇಮರಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಬೃಹತ್ ಕಾರ್ಯಕ್ರಮ

ನವಲಗುಂದ : ಶಿವಶರಣೆ ಹೇಮರಡ್ಡಿ ಮಲ್ಲಮ್ಮ 595ನೇ ಜಯಂತಿಯ ನಿಮಿತ್ತ ನವಲಗುಂದದ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಬೃಹತ್ ಕಾರ್ಯಕ್ರಮವನ್ನು ಗವಿಮಠದ ಮ.ನಿ.ಪ್ರ. ಶ್ರೀ ಬಸವಲಿಂಗ ಮಹಾಸ್ವಾಮಿಗಳು ಹಾಗೂ ಎನ್ ಹೆಚ್ ಕೋನರಡ್ಡಿ ಉಪಸ್ಥಿತಿಯಲ್ಲಿ ಆಯೋಜಿಸಲಾಗಿತ್ತು.

ಈ ವೇಳೆ ಶರಣು ಹಿರೇಮಠ ಯಮನೂರ ಇವರಿಂದ ವಿಶೇಷ ನಗೆಹಬ್ಬ ಹಾಗೂ ಹಾಸ್ಯ ರಸಮಂಜರಿ ಕಾರ್ಯಕ್ರಮ ಜರುಗಿತು. ನವಲಗುಂದ ಪುರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷರಾದ ಪದ್ಮಾವತಿ ಪೂಜಾರ ಹಾಗೂ ನವಲಗುಂದ ನೌಕರರ ಸಂಘದ ಅಧ್ಯಕ್ಷರಾಗಿ, ಕಾರ್ಯನಿರ್ವಾಹಕ ಅಭಿಯಂತರರಾಗಿ ನಿವೃತ್ತರಾದ ಬಿ.ಹೆಚ್. ಪಾಟೀಲ ಅವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವಲಗುಂದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಹೆಚ್. ಕೋನರಡ್ಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಎನ್. ಗಡ್ಡಿ, ಬಾಪುಗೌಡ ಎಸ್. ಪಾಟೀಲ, ಕೆಪಿಸಿಸಿ ಸದಸ್ಯ ವಿಜಯ ಕುಲಕರ್ಣೀ, ಅಬಕಾರಿ ಅಧಿಕಾರಿ ಶ್ರೀಮತಿ ಗೀತಾ ತಗ್ಯಾಳ ಸೇರಿದಂತೆ ಅನೇಕ ಗಣ್ಯರು, ಇತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/05/2022 05:23 pm

Cinque Terre

15.07 K

Cinque Terre

0

ಸಂಬಂಧಿತ ಸುದ್ದಿ