ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಕೊಡುವ ಗೌರವ ಡಾಕ್ಟರೇಟ್ ಪದವಿಯನ್ನು ಈ ಬಾರಿ ಶ್ರೀ ಮುರಘಾಮಠದ ಪೀಠಾಧ್ಯಕ್ಷರಾದ ಮ.ನಿ.ಪ್ರ ಮಲ್ಲಿಕಾರ್ಜುನ ಮಹಾ ಸ್ವಾಮೀಜಿ ಅವರಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಧಾರವಾಡದ ಮೃತ್ಯುಂಜಯ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಅರವಿಂದ ಏಗನಗೌಡರ ಸನ್ಮಾನಿಸಿ, ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದಾರೆ.
ಸ್ವಾಮೀಜಿ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮೃತ್ಯುಂಜಯ ನಗರದ ಚಂದ್ರಶೇಖರ ರಾಗಿ, ಸೋಮಣ್ಣ ಅರಳಿ, ಮಂಜುನಾಥ ಸಾಲಿಮಠ, ಈಶ್ವರ ಮಾಲಗಾರ, ಸೇರಿದಂತೆ ಇತರೆ ಗಣ್ಯರು ಭಾಗಿಯಾಗಿದ್ದರು.
Kshetra Samachara
05/06/2022 01:40 pm