ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಬಕ್ರೀದ್ ವಿಶೇಷ ಆಚರಣೆ: ಶಾಂತಿ ಸೌಹಾರ್ದತೆಗೆ ಪ್ರಾರ್ಥನೆ

ಹುಬ್ಬಳ್ಳಿ : ಇಸ್ಲಾಂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬದ ಪ್ರಯುಕ್ತವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಂದು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ದೇಶದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಅಲ್ಲಾಹನಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಹೌದು.. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಮುಸ್ಲಿಂ ಸಮುದಾಯದ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದೇಶದಲ್ಲಿ ಉತ್ತಮ ಮಳೆ ಬೆಳೆಯಾಗಿ ಸರ್ವ ಜನರು ಸುಖದಿಂದ ಜೀವನ ನಡೆಸಲಿ ಎಂದು ಪ್ರಾರ್ಥನೆ ಮಾಡಿದರು.

ಇನ್ನೂ ಸಾಮೂಹಿಕ ಪ್ರಾರ್ಥನೆಯಲ್ಲಿ ವೃದ್ಧರು, ಮಕ್ಕಳು ಹಾಗೂ ವಯಸ್ಕರು ಭಾಗವಹಿಸಿದ್ದು, ವಿಶೇಷವಾಗಿ ನಮಾಜ್ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

10/07/2022 03:40 pm

Cinque Terre

26.3 K

Cinque Terre

2

ಸಂಬಂಧಿತ ಸುದ್ದಿ