ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಚಂದ್ರಶೇಖರ ಗುರೂಜಿಗೆ ಧಾರವಾಡದಲ್ಲಿ ಶ್ರದ್ಧಾಂಜಲಿ

ಧಾರವಾಡ: ಇತ್ತೀಚೆಗೆ ಹತ್ಯೆಗೀಡಾದ ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಶ್ರದ್ಧಾಂಜಲಿ ಸಭೆಯನ್ನು ಧಾರವಾಡದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಚಂದ್ರಶೇಖರ ಗುರೂಜಿ ಅವರ ಅನುಯಾಯಿಗಳು ಈ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಮೂರುಸಾವಿರ ಮಠದ ಗುರುಸಿದ್ದರಾಜಯೋಗಿಂದ್ರ ಸ್ವಾಮೀಜಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ನಾಗರಾಜ ಛಬ್ಬಿ, ಮೋಹನ ಲಿಂಬಿಕಾಯಿ ಸೇರಿದಂತೆ ಚಂದ್ರಶೇಖರ ಗುರೂಜಿ ಅನುಯಾಯಿಗಳು, ಮಠಾಧೀಶರು ಗುರೂಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಗುರೂಜಿ ಜೀವನದ ಕುರಿತು ಕಿರುಚಿತ್ರ ಪ್ರದರ್ಶನ ಮಾಡಲಾಯಿತು. ಈ ಚಿತ್ರದ ಮೂಲಕ ಅವರು ಬೆಳೆದು ಬಂದ ಹಾದಿ, ಅವರು ಜೀವಿತಾವಧಿಯಲ್ಲಿ ಮಾಡಿದ ಮಾನವೀಯ ಕೆಲಸಗಳನ್ನು ಮೆಲುಕು ಹಾಕಲಾಯಿತು.

Edited By : Manjunath H D
Kshetra Samachara

Kshetra Samachara

15/07/2022 05:18 pm

Cinque Terre

16.42 K

Cinque Terre

0

ಸಂಬಂಧಿತ ಸುದ್ದಿ