ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎರಡು ಏತ ನೀರಾವರಿ ಯೋಜನೆ ಹುತಾತ್ಮ ರೈತರಿಗೆ ಅರ್ಪಣೆ: ಸಚಿವ ಮುನೇನಕೊಪ್ಪ

ಹುಬ್ಬಳ್ಳಿ: ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹುಬ್ಬಳ್ಳಿ ತಾಲೂಕಿನ ಜ್ವಲಂತ ಸಮಸ್ಯೆಗಳ ಕುರಿತು ಸಚಿವ ಶಂಕರಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿ ಈಗಾಗಲೇ ಸಾರ್ವಜನಿಕರ ಜ್ವಲಂತ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಈ ಬಗ್ಗೆ ಪಿಡಬ್ಲೂಡಿ, ಸಾರಿಗೆ ಅಧಿಕಾರಿಗಳು, ಕೆಡಿಪಿ ಸದಸ್ಯರ ಸಮ್ಮುಖದಲ್ಲಿ ಸಮಸ್ಯೆಗಳನ್ನು ಆಲಿಸಲಾಗಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಭರವಸೆ ನೀಡಿದರು.

ನಾಳೆ ಜಿಲ್ಲೆಯಲ್ಲಿ ರೈತ ಹುತಾತ್ಮ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಎರಡು ಏತ ನೀರಾವರಿಗೆ ಚಾಲನೆ ನೀಡುವ ಮೂಲಕ ಬೆಣ್ಣಿ ಹಳ್ಳ ಹಾಗೂ ತುಪ್ಪರಿಹಳ್ಳದ ಏತ ನೀರಾವರಿ ಯೋಜನೆಯನ್ನು ಹುತಾತ್ಮ ರೈತರಿಗೆ ಸಮರ್ಪಣೆ ಮಾಡುವ ಕಾರ್ಯವನ್ನು ಮಾಡಲಾಗುತ್ತದೆ. ಈಗಾಗಲೇ ಒಂದು ಟಿಎಂಸಿ ನೀರನ್ನು ಸಾರ್ವಜನಿಕರಿಗೆ ಕುಡಿಯುವ ಸಲುವಾಗಿ ಇಂತಹದೊಂದು ಮಹತ್ವದ ಯೋಜನೆಯ ಸಮೀಕ್ಷೆ ಕೂಡ ಮಾಡಲಾಗಿದೆ. ಇನ್ನೇನು ಕೆಲವು ದಿನಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಅವರು ಹೇಳಿದರು.

Edited By : Shivu K
Kshetra Samachara

Kshetra Samachara

20/07/2022 09:19 pm

Cinque Terre

73.96 K

Cinque Terre

3

ಸಂಬಂಧಿತ ಸುದ್ದಿ