ಹುಬ್ಬಳ್ಳಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಪ್ರತಿಭೋತ್ಸವ - ಸಾಧಕರಿಗೆ ಸನ್ಮಾನ ಹಾಗೂ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮವನ್ನು ಜುಲೈ 24 ರಂದು ಬೆಳಿಗ್ಗೆ 10.30 ಕ್ಕೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಮಂಡಳಿಯ ನಿರ್ದೇಶಕ ವಸಂತ ನಾಡಜೋಶಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದ್ದು, ಅದರಂತೆ ಸಾಮಾಜಿಕ, ಮಾಧ್ಯಮ, ವೈದ್ಯಕೀಯ, ಶಿಕ್ಷಣ, ಕೃಷಿ, ಸಂಗೀತ ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಗುವುದು. ಅಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಶಿಕ್ಷಣ, ಕೌಶಲ್ಯಾಭಿವೃದ್ದಿ, ಸ್ವಯಂ ಉದ್ಯೋಗ ಸೇರಿದಂತೆ ಇನ್ನಿತರ ಯೋಜನೆಗಳಿಗೆ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಹಾಗೂ ಇನ್ನಿತರ ಸರ್ಕಾರದ ಯೋಜನೆಗಳ ಪರಿಚಯ ಮಾಡಿಕೊಡಲಾಗುವುದು ಎಂದರು.
ಇನ್ನು ಈ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಶಂಕರಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಪ್ರದೀಪ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್, ಅಮೃತ ದೇಸಾಯಿ, ಮಹಾಪೌರ ಈರೇಶ ಅಂಚಟಗೇರಿ, ಉಮಾ ಮುಕುಂದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹತ್ತು ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು.
Kshetra Samachara
22/07/2022 01:49 pm