ಧಾರವಾಡ: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಶ್ರೀಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು ಮತ್ತು ಹೊಂಬೆಳಕು ಪ್ರತಿಷ್ಠಾನದ ವತಿಯಿಂದ ಭಾರತ ಮಾತೆಗೆ ಸ್ವಾತಂತ್ರ್ಯದಾರತಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅಲ್ಲದೇ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ನಮನಗಳನ್ನು ಸಲ್ಲಿಸಿ, ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇದಕ್ಕೂ ಮುಂಚೆ ಮೇಯರ್ ಈರೇಶ ಅಂಚಟಗೇರಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಅಧ್ಯಕ್ಷೆ ಡಾ.ವೀಣಾ ಬಿರಾದಾರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕವಿವಿ ಹಣಕಾಸು ಅಧಿಕಾರಿ ಎ.ಎನ್.ತಾಮ್ರಗುಂಡಿ, ಕಾಲೇಜು ಪ್ರಾಚಾರ್ಯ ಪ್ರೊ.ನಾಗರಾಜ ಶಿರೂರ, ಡಾ.ಎಸ್.ಬಿ.ಗಾಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಮಹಿಳಾ ಮಂಡಳದವರು, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳಿಗೆ ಸಾಮೂಹಿಕವಾಗಿ ನೃತ್ಯ ಮಾಡಿ ಗಮನಸೆಳೆದರು.
Kshetra Samachara
08/08/2022 05:05 pm