ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಗಮನಸೆಳೆದ ತಿರಂಗಾ ಯಾತ್ರೆ

ಧಾರವಾಡ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದಲ್ಲಿ ಮಹಾನಗರ ಪಾಲಿಕೆ ವತಿಯಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಧಾರವಾಡದ ಜೆಎಸ್ಎಸ್ ಕಾಲೇಜಿನಿಂದ ಆರಂಭಗೊಂಡ ಈ ತಿರಂಗಾ ಯಾತ್ರೆಯಲ್ಲಿ ಶಾಸಕ ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಪಾಲಿಕೆ ಇತರ ಸಿಬ್ಬಂದಿ, ಸಾರ್ವಜನಿಕರು ಹಾಗೂ ಮಕ್ಕಳು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಯೊಬ್ಬರು ಬಿಳಿ ಬಣ್ಣದ ಟೀ ಶರ್ಟ್ ಧರಿಸಿ, ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ನಗರದ ಪ್ರಮುಖ ರಸ್ತೆಯಳಲ್ಲಿ ಸಂಚರಿಸಿ ಗಮನಸೆಳೆದರು. ಅಲ್ಲದೇ ಯಾತ್ರೆಯುದ್ಧಕ್ಕೂ ಭಾರತ ಮಾತಾ ಕೀ ಜೈ, ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗಿ ದೇಶಾಭಿಮಾನ ಮೆರೆದರು.

Edited By : Manjunath H D
Kshetra Samachara

Kshetra Samachara

11/08/2022 02:35 pm

Cinque Terre

11.58 K

Cinque Terre

0

ಸಂಬಂಧಿತ ಸುದ್ದಿ