ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಹರ್ ಘರ್ ತಿರಂಗಾ ಅಭಿಯಾನದ ಸಂಭ್ರಮ

ಅಣ್ಣಿಗೇರಿ: ಅಣ್ಣಿಗೇರಿ ತಾಲೂಕಿನ ಗ್ರಾಮಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ರಾಷ್ಟ್ರ ಧ್ವಜಾರೋಹಣ ಪ್ರಾರಂಭವಾಗಿದೆ. ತಾಲೂಕಿನ ಹಲವು ಗ್ರಾಮದಲ್ಲಿ ಇಂದು ಮುಂಜಾನೆಯಿಂದಲೇ ಎಲ್ಲರ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡುತ್ತಿರುವ ದೃಶ್ಯಗಳು ಹಾಗೂ ಯುವಜನರು ಧ್ವಜಾರೋಹಣ ಮಾಡುತ್ತಿರುವ ದೃಶ್ಯಗಳು ಕಂಡುಬಂದವು.

ಅದರಂತೆ ಉರ್ದು ಶಾಲೆ, ಹಾಲು ಉತ್ಪಾದಕರ ಕೇಂದ್ರ, ಪಶು ಆಸ್ಪತ್ರೆ ಹೀಗೆ ಹಲವಾರು ಕಡೆಗಳಲ್ಲಿ ರಾಷ್ಟ್ರಧ್ವಜ ಹಾರಾಡುತ್ತಿರುವ ದೃಶ್ಯಗಳು ಕಂಡು ಬಂದವು. 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದಲ್ಲಿ ಹರ್ ಘರ್ ತಿರಂಗ ಎಂಬ ಅಭಿಯಾನದ ಮೂಲಕ ಎಲ್ಲರ ಮನೆಗಳ ಮೇಲೆ ಮತ್ತು ಸರ್ಕಾರಿ ಕಚೇರಿಗಳ ಮೇಲೆ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಒಟ್ಟಾರೆಯಾಗಿ ಈ ಸಲ 75ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲರೂ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

13/08/2022 12:14 pm

Cinque Terre

22.06 K

Cinque Terre

0

ಸಂಬಂಧಿತ ಸುದ್ದಿ