ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಆರ್.ಎನ್.ಶೆಟ್ಟಿ ಕ್ರಿಡಾಂಗಣದಲ್ಲಿ ರಾರಾಜಿಸಿದ ರಾಷ್ಟ್ರಧ್ವಜ

ಧಾರವಾಡ: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ಲಾಬುರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಸೇರಿದಂತೆ ಅನೇಕರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಜಿಲ್ಲಾಡಳಿತದ ಈ ಧ್ವಜಾರೋಹಣ ಕಾರ್ಯಕ್ರಮಕ್ಕೆ ನಗರದ ಎಲ್ಲ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಧಿಕಾರಿಗಳು ಸಾಕ್ಷಿಯಾದರು.ಧ್ವಜಾರೋಹಣದ ನಂತರ ಸಚಿವರು ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿ, ತೆರೆದ ವಾಹನದ ಮೂಲಕ ಪರಿವೀಕ್ಷಣೆ ನಡೆಸಿದರು.

Edited By : Manjunath H D
Kshetra Samachara

Kshetra Samachara

15/08/2022 11:20 am

Cinque Terre

55.14 K

Cinque Terre

0

ಸಂಬಂಧಿತ ಸುದ್ದಿ