ಧಾರವಾಡ: ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರು ರೂಪಿಸಿದ ಕಾನೂನುಗಳು, ಜಾರಿಗೊಳಿಸಿದ ಕಾರ್ಯಕ್ರಮಗಳಿಂದಾಗಿ ಬಾಯಿ ಇಲ್ಲದ ದುರ್ಬಲ ಸಮುದಾಯಗಳಿಗೆ ಧ್ವನಿ ಹಾಗೂ ಶಕ್ತಿ ಬರಲು ಸಾಧ್ಯವಾಗಿದೆ ಎಂದು ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಹೇಳಿದ್ದಾರೆ.
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಂದು ಆಲೂರು ವೆಂಕಟರಾವ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಮಾತನಾಡಿ, ಭೂಮಿಯ ಗೇಣಿ ಹಕ್ಕನ್ನು ಕೇವಲ ಶಾಸನವಾಗಿ ರೂಪಿಸದೇ ಅದನ್ನು ಅನುಷ್ಠಾನಗೊಳಿಸಿದ ಶ್ರೇಯಸ್ಸು ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಸುಮಾರು 15 ಲಕ್ಷ ಬಡವರಿಗೆ ಇದರಿಂದ ಭೂಮಿಯ ಹಕ್ಕು ದೊರೆಯಿತು. ಋಣ ಪರಿಹಾರ ಕಾಯ್ದೆ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಭೂ ಪರಭಾರೆಗೆ ನಿಯಮ ರೂಪಿಸಿದ್ದು, ದೀನ ದುರ್ಬಲರ ಬಗ್ಗೆ ಅವರಿಗಿದ್ದ ಕಾಳಜಿಯ ದ್ಯೋತಕವಾಗಿದೆ ಎಂದರು.
ಶಶಿಧರ ತೋಡಕರ ಅವರಿಗೆ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.
Kshetra Samachara
21/08/2022 02:02 pm