ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಂವೇದನ ಕಾರ್ಯಕ್ರಮ ಉದ್ಘಾಟನೆ

ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು ಮತ್ತು ವಿಶೇಷ ಮಕ್ಕಳ ಪೊಲೀಸ್ ಘಟಕದ ಅಧಿಕಾರಿಗಳಿಗೆ ಸಂವೇಧನ ಕಾರ್ಯಕ್ರಮವನ್ನು ಶನಿವಾರ ಸನ್ಮತಿ ಮಾರ್ಗ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇನ್ನು ಕಾರ್ಯಕ್ರಮದ ಉದ್ಘಾಟನೆಯನ್ನು ಸಸಿಗೆ ನೀರುಣಿಸುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ಕೆ. ಜಿ, ಶಾಂತಿ ಅವರು ನೆರವೇರಿಸಿದರು. ಹಾಗೂ ಅಧ್ಯಕ್ಷತೆಯನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ ವಹಿಸಿಕೊಂಡಿದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪುಷ್ಪಲತ ಸಿ.ಎಮ್, 2ನೇ ಆಧಿಕ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜೆ ಎಂ ಎಫ್ ಸಿ ಮರಿಯಪ್ಪ, ಹುಬ್ಬಳ್ಳಿ-ಧಾರವಾಡ ನಗರ ಉಪ ಪೊಲೀಸ್‌ ಆಯುಕ್ತರಾದ ಡಾ. ಗೋಪಾಲ ಎಮ್, ಬ್ಯಾಕೋಡ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ ಡೊಳ್ಳಿನ ಸೇರಿದಂತೆ ಹಲವಾರು ಇದ್ದರು.

Edited By : PublicNext Desk
Kshetra Samachara

Kshetra Samachara

28/08/2022 11:03 am

Cinque Terre

7.26 K

Cinque Terre

0

ಸಂಬಂಧಿತ ಸುದ್ದಿ