ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಸೆ.18 ರಂದು ದೇವಾಂಗ ಸಮಾಜದಿಂದ ಪ್ರತಿಭಾ ಪುರಸ್ಕಾರ, ಸನ್ಮಾನ

ಹುಬ್ಬಳ್ಳಿ : ಕರ್ನಾಟಕ ರಾಜ್ಯ ದೇವಾಂಗ ಸಂಘ ಬೆಂಗಳೂರು ಹಾಗೂ ಹುಬ್ಬಳ್ಳಿ ದೇವಾಂಗ ಕೇಂದ್ರೀಯ ಸಮಿತಿ ಇವರ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ನಗರದ ಗೋಕುಲ್ ರಸ್ತೆಯ ಚವ್ಹಾನ್ ಗ್ರೀನ್ ಗಾರ್ಡನ್ ನಲ್ಲಿ ಸೆ.18ರಂದು ಬೆ. 10-30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ದೇವಾಂಗ ಕೇಂದ್ರಿಯ ಸಮಿತಿ ಅಧ್ಯಕ್ಷರಾದ ನಾಗೇಶ ಭಾಪರೆ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, 90ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನಿಸಲಾಗುವುದು ಎಂದ ಅವರು ಅಂದಿನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಂಪಿ ಹೇಮಕೂಟದ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀ ದಯಾನಂದಪುರೀ ಮಹಾಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ನೆರವೇರಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ದೇವಾಂಗ ಅಧ್ಯಕ್ಷರಾದ ರವೀಂದ್ರ ಕಲಬುರ್ಗಿ, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಪೌರರಾದ ಈರೇಶ್ ಅಂಚಟಗೇರಿ, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣರವರು, ಶಾಸಕರಾದ ಅರವಿಂದ ಬೆಲ್ಲದ್, ಪ್ರಸಾದ್ ಅಬ್ಬಯ್ಯ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ವಿ.ಪ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ್ ಶೆಟ್ಟರ್, ಕೇಶವ್ ಪ್ರಸಾದ್, ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಶ್ರೀನಿವಾಸ ಬಳ್ಳಿ, ದೇವಾಂಗ ಸಂಘದ ಅಧ್ಯಕ್ಷ ಡಾ.ಜಿ.ರಮೇಶ್, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಬಸವರಾಜ ಕೇಲಗಾರ್ ಅವರಿಗೆ ಸನ್ಮಾನ ಮಾಡಲಾಗುವುದು ಎಂದರು.

Edited By : Manjunath H D
Kshetra Samachara

Kshetra Samachara

16/09/2022 01:26 pm

Cinque Terre

9.71 K

Cinque Terre

0

ಸಂಬಂಧಿತ ಸುದ್ದಿ