ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಪಟ್ಟಣ ಪಂಚಾಯಿತಿಯಿಂದ ಪೌರ ಕಾರ್ಮಿಕರಿಗೆ ಸನ್ಮಾನ

ಕಲಘಟಗಿ: ಪಟ್ಟಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಕಲಘಟಗಿಯ ಪಟ್ಟಣ ಪಂಚಾಯತ್ ಸಮುದಾಯ ಭವನದಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನಿಸಲಾಯಿತು.

ಅದೇ ರೀತಿ ಪೌರ ಕಾರ್ಮಿಕರ ಮಕ್ಕಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿಯಿಂದ ಉಚಿತ ಟ್ಯಾಬ್ ವಿತರಿಸಿದರು. ಇದೇ ಸಂದರ್ಭದಲ್ಲಿ ಸಮಾಜಕಲ್ಯಾಣ ಇಲಾಖೆಯಿಂದ ಎರಡು ಹಾಸ್ಟೆಲ್‌ಗಳಿಗೆ ಟಿವಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ವೈ.ಜಿ ಗದ್ದಿಗೌಡರ ಪಟ್ಟಣ ಪಂಚಾಯತ್ ಅಧ್ಯಕ್ಷೆ ಅನಸೂಯಾ ಹೆಬ್ಬಳ್ಳಿಮಠ, ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ಉದಯ ಗೌಡರ

Edited By : Vijay Kumar
Kshetra Samachara

Kshetra Samachara

24/09/2022 03:21 pm

Cinque Terre

9.56 K

Cinque Terre

0

ಸಂಬಂಧಿತ ಸುದ್ದಿ