ನವಲಗುಂದ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 115ನೇ ಜನ್ಮದಿನ. ಭಗತ್ ಸಿಂಗ್ ಅವರ ಜನ್ಮದಿನದಂದು, ಸ್ವಾತಂತ್ರ್ಯ ಹೋರಾಟಗಾರನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅವರ ಭಾವಚಿತ್ರಕ್ಕೆ ಎಲ್ಲೆಡೆ ಗೌರವ ಸಲ್ಲಿಸಲಾಯಿತು.
ಅದೇ ರೀತಿ ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದಲ್ಲಿ ನೂರಾರು ಗ್ರಾಮಸ್ಥರಿಂದ ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ನಂತರ ಪೂಜೆ ಸಲ್ಲಿಸಿ, ಮಕ್ಕಳು, ಮಹಿಳೆಯರು, ಯುವಕರು ಹಾಗೂ ಹಿರಿಯರಿಂದ ಹುಟ್ಟುಹಬ್ಬದ ಶುಭಾಶಯ ಕೋರಿದರು.
Kshetra Samachara
29/09/2022 07:20 pm