ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಉಪ್ಪಿನ ಬೆಟಗೇರಿಯಲ್ಲಿ ಬನಶ್ರೀ ಉತ್ಸವಕ್ಕೆ ಚಾಲನೆ

ಧಾರವಾಡ: ದಸರಾ ಹಬ್ಬದ ಅಂಗವಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಬನಶ್ರೀ ಉತ್ಸವಕ್ಕೆ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು.

ಉಪ್ಪಿನ ಬೆಟಗೇರಿ ಗ್ರಾಮದ ಬನಶಂಕರಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಬನಶಂಕರಿ ದೇವಿಗೆ ಒಂಬತ್ತು ದಿನಗಳ ಕಾಲ ವಿವಿಧ ಅವತಾರಗಳಿಂದ ಸಿಂಗರಿಸಲಾಗಿತ್ತು. ಕುಂಕುಮಾರ್ಚನೆ, ಸಹಸ್ರ ಬಿಲ್ವಾರ್ಚನೆ ಹೀಗೆ ನಾನಾ ಪೂಜಾ ಕೈಂಕರ್ಯಗಳನ್ನು ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಹಮ್ಮಿಕೊಳ್ಳಲಾಗಿದೆ.

ಆಯುಧ ಪೂಜೆ, ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಈ ಬನಶ್ರೀ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಉತ್ಸವಕ್ಕೆ ಚಾಲನೆ ನೀಡಿದ ಶಾಸಕ ಅಮೃತ ದೇಸಾಯಿ, ತಲೆ, ತಲಾಂತರಗಳಿಂದ ನವರಾತ್ರಿ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಬ್ಬಕ್ಕೆ ತನ್ನದೇ ಆದ ಇತಿಹಾಸವಿದೆ. ಉಪ್ಪಿನ ಬೆಟಗೇರಿಯಲ್ಲಿ ಹಮ್ಮಿಕೊಂಡಿರುವ ಈ ಉತ್ಸವ ನಿಜಕ್ಕೂ ಮಾದರಿ ಎಂದರು.

ಉಪ್ಪಿನ ಬೆಟಗೇರಿಯ ಕುಮಾರ ವಿರುಪಾಕ್ಷ ಸ್ವಾಮೀಜಿ ಆಶೀರ್ವಚನ ನೀಡಿದರು. ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಮಾತನಾಡಿದರು. ದೇವಾಂಗ ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

03/10/2022 10:14 pm

Cinque Terre

51.61 K

Cinque Terre

0

ಸಂಬಂಧಿತ ಸುದ್ದಿ