ಹುಬ್ಬಳ್ಳಿ: ದಸರಾ ಹಬ್ಬದ ಕಲರವ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಚಿಗುರೊಡೆದಿದೆ. ಇಂದು ಆಯುಧ ಪೂಜೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹೊಸೂರಿನ ಗಾಳಿ ಶ್ರೀ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ದುರ್ಗಾದೇವಿಗೆ ವಿಶೇಷ ಅಲಂಕಾರ ಮಾಡಿದ್ದು, ದೇವಿ ದರ್ಶನಕ್ಕೆ ಜನರು ಹರಿದು ಬರುತ್ತಿದ್ದಾರೆ.
ಹೌದು.. .ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಶ್ರೀ ದುರ್ಗಾದೇವಿಗೆ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಅಲ್ಲದೇ, ಆಯುಧ ಪೂಜೆ ಹಾಗೂ ವಿಜಯದಶಮಿಯ ಪ್ರಯುಕ್ತ ವಿಶೇಷವಾಗಿ ಪೂಜೆ- ಪುನಸ್ಕಾರ ಸಲ್ಲಿಸಲಾಗುತ್ತದೆ.
ಇನ್ನು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸುತ್ತಿರುವ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಶ್ರೀ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲದೆ, ಹುಬ್ಬಳ್ಳಿ - ಧಾರವಾಡ ಅವಳಿನಗರದ ಜನರು ಮಾತ್ರವಲ್ಲದೆ, ಸುತ್ತಮುತ್ತಲಿನ ಜಿಲ್ಲೆಯ ಜನರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದುಕೊಳ್ಳುತ್ತಿರುವುದು ವಿಶೇಷವಾಗಿದೆ.
Kshetra Samachara
04/10/2022 03:50 pm