ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ಸಿದ್ದಾರೂಢರ ರೈಲ್ವೆ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಮೂರನೇ ದ್ವಾರದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ಮಾಲೀಕರಾದ ಡಾ.ವಿ.ಎಸ್.ವಿ ಪ್ರಸಾದ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಸಹಭಾಗಿತ್ವದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ್ದು, ಅಶ್ವಿನಿ ವೈಷ್ಣವ ಅವರ ಭಾವಚಿತ್ರದ ಕಲಾಕೃತಿಯನ್ನು ಕಾಣಿಕೆಯಾಗಿ ನೀಡಿದರು.ಇನ್ನೂ ಈ ಸಂದರ್ಭದಲ್ಲಿ ಶಾಸಕರು, ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
11/10/2022 09:45 pm