ಧಾರವಾಡ: ಕೊರೊನಾದಿಂದಾಗಿ ಲಾಕ್ ಡೌನ್ ಅವಧಿಯಲ್ಲಿ ಎಲ್ಲ ಉದ್ಯಮಗಳು ಸಾಕಷ್ಟು ನಷ್ಟ ಅನುಭವಿಸಿವೆ.
ಶಿಕ್ಷಣ ಸಂಸ್ಥೆಗಳು ಸಾಕಷ್ಟು ದಯನೀಯ ಸ್ಥಿತಿ ತಲುಪಿದ್ದು, ಇನ್ನಷ್ಟೇ ಚೇತರಿಸಿಕೊಳ್ಳಬೇಕಿದೆ.
ವಿದ್ಯಾರ್ಥಿಗಳು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಇದಕ್ಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹೊರತಾಗಿಲ್ಲ.
ವಿವಿಯಲ್ಲಿ ಶೇ.60 ರಷ್ಟು ಬೋಧಕೇತರ ಹುದ್ದೆಗಳು ಹಾಗೂ ಶೇ.30-35 ರಷ್ಟು ಬೋಧಕ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಈ ಸಂಬಂಧ ಸ್ಪಷ್ಟನೆ ನೀಡಿರುವ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಬಿ.ಚಟ್ಟಿ, 595 ಶಿಕ್ಷಕರ ಹುದ್ದೆಗಳಲ್ಲಿ 218, 1,074 ಶಿಕ್ಷಕೇತರ ಹುದ್ದೆಗಳಲ್ಲಿ 645 ಹುದ್ದೆಗಳು ಖಾಲಿಯಿವೆ.
ಬೋಧಕರ ಹುದ್ದೆಗಳು ಖಾಲಿಯಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ.
ಆ ಸಮಸ್ಯೆಯನ್ನು ಹೋಗಲಾಡಿಸಲು ಗುತ್ತಿಗೆ ಆಧಾರದ ಮೇಲೆ ಅವಶ್ಯಕತೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.
ನಾನ್ ಟೀಚಿಂಗ್ ವಿಭಾಗದಲ್ಲೂ ಸಹ ಸಾಕಷ್ಟು ಹುದ್ದೆಗಳು ಖಾಲಿಯಿದ್ದು, ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸುವವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಂಡು ಕೆಲಸ ನಡೆಸಲಾಗುತ್ತಿದೆ.
ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿಯಿರುವುದರಿಂದ ಕೃಷಿ ವಿವಿಗೆ ಹಾಗೂ ಬೇರೆ ಬೇರೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ತೊಂದರೆಯುಂಟಾಗಿದೆ ಎಂದು ಹೇಳಿದರು.
ಕೊರೊನಾ ಸಂದಿಗ್ಧ ಸ್ಥಿತಿಯಲ್ಲಿ ವಿವಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳದಂತೆ ಸರ್ಕಾರ ಸೂಚಿಸಿತ್ತು.
ಈ ಬಗ್ಗೆ ಸರ್ಕಾರ ಅನುಮತಿ ನೀಡಿದ ಬಳಿಕ ಎಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ವಿವಿ ತೀರ್ಮಾನಿಸಿದೆ ಎಂದು ಅವರು ತಿಳಿಸಿದ್ದಾರೆ.
Kshetra Samachara
23/10/2020 04:00 pm