ಧಾರವಾಡ: ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ಪದವಿ ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಹಾಗೂ ತಕ್ಷಣ ಕೋರ್ಸ್ ಆರಂಭಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಫಲ ದೊರಕಿದೆ.
ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ತುರ್ತು ಸಿಂಡಿಕೇಟ್ ಸಭೆ ಕರೆದ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಕೊರೊನಾ ಇರುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ಮಾತ್ರ ಕಾನೂನು ಪದವಿಗೆ ಪ್ರವೇಶಾತಿ ನೀಡಲು ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಿ ನೋಟಿಫಿಕೇಶನ್ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
Kshetra Samachara
03/11/2020 07:59 pm