ಹುಬ್ಬಳ್ಳಿ: ಎಸ್.ಎಸ್.ಎಲ್.ಸಿ ಪರೀಕ್ಷೆಯ ಹಾಲ್ ನಲ್ಲಿ ಜೇನು ಹುಳುಗಳು ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರದ ಸೇಂಟ್ ಮೈಕಲ್ ಸ್ಕೂಲ್ ನ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಗಣಿತ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಏಕಾಏಕಿ ಜೇನು ಹುಳು ದಾಳಿಯಿಂದ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡಿಗೇಡಿಗಳಿಂದ ಜೇನು ಹುಟ್ಟಿಗೆ ಕಲ್ಲು ಎಸೆತ ಹಿನ್ನೆಲೆಯಲ್ಲಿ ಜೇನು ಹುಳು ದಾಳಿ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಪರೀಕ್ಷಾ ಕೇಂದ್ರದಲ್ಲಿದ್ದ ಮಕ್ಕಳು ಸೇರಿದಂತೆ ಪೊಲೀಸ್ ಸಿಬ್ಬಂದಿಗೂ ಜೇನು ಹುಳುಗಳು ಕಚ್ಚಿದ್ದು, ವಿದ್ಯಾರ್ಥಿ ಇಮಾಮ್, ಪೋಷಕರಾದ ರಾಜೇಶ್ವರಿ ಕೆ, ಮತ್ತು ಪೊಲೀಸ್ ಸಿಬ್ಬಂದಿ ವಿದ್ಯಾ ದ್ಯಾಮನೂರು ಮೇಲೆ ಜೇನು ಹುಳುಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿವೆ. ದಿಢೀರ್ ದಾಳಿಯಿಂದ ಹಾಲ್ ನಲ್ಲಿದ್ದ ವಿದ್ಯಾರ್ಥಿಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಸದ್ಯ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
=====
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/04/2022 01:41 pm