ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕುಸಿದು ಬಿದ್ದ ಅಂಗನವಾಡಿ ಕಟ್ಟಡ: ತಪ್ಪಿತು ದುರಂತ

ಧಾರವಾಡ: ನಿರಂತರ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಅಂಗನವಾಡಿ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರದಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸುಮಾರು 40 ವರ್ಷ ಹಳೆಯದಾದ ಈ ಅಂಗನವಾಡಿ ಕಟ್ಟಡ ಮೊದಲೇ ಶಿಥಿಲಗೊಂಡಿತ್ತು. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಇಂದು ಏಕಾಏಕಿ ಕುಸಿದು ಬಿದ್ದಿದೆ. ಇಲ್ಲಿಗೆ ಸುಮಾರು 20 ಕ್ಕೂ ಹೆಚ್ಚು ಮಕ್ಕಳು ಬರುತ್ತಿದ್ದು, ಬೆಳಗಿನ ಜಾವ ಕಟ್ಟಡ ಕುಸಿದಿರುವುದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಶಿಥಿಲಗೊಂಡ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಈ ಹಿಂದೆಯೇ ಸಾಕಷ್ಟು ಸಲ ಮನವಿ ಮಾಡಲಾಗಿದೆ. ಆದರೆ, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

22/07/2022 04:17 pm

Cinque Terre

40.52 K

Cinque Terre

0

ಸಂಬಂಧಿತ ಸುದ್ದಿ