ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಾಸ್ಟೇಲ್ ತೆರೆಯಲು ಸಿದ್ಧತೆ- ಶೇ.50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ

ಹುಬ್ಬಳ್ಳಿ: ಕಾಲೇಜು ಹಾಸ್ಟೇಲ್‌ಗಳನ್ನು ಪುನಾರಂಭಗೊಳಿಸಲು ಸಮಾಜ ಕಲ್ಯಾಣ ಇಲಾಖೆಯು ಭರ್ಜರಿ ಸಿದ್ಧತೆ ನಡೆದಿದ್ದು, ಆರಂಭದಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳಷ್ಟೇ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ರಾಜ್ಯ ಸರ್ಕಾರ ನವೆಂಬರ್‌ 17ರಿಂದ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿದೆ. ಹೀಗಾಗಿ ಅಂದಿನಿಂದಲೇ ರಾಜ್ಯದಾದ್ಯಂತ ಕಾಲೇಜು ವಿದ್ಯಾರ್ಥಿನಿಲಯಗಳನ್ನೂ ತೆರೆಯಲು ಸಿದ್ಧತೆ ಮಾಡಕೊಳ್ಳಲಾಗಿದೆ. ಜೊತೆಗೆ ವಿದ್ಯಾರ್ಥಿಗಳು ಅನುಸರಿಸಬೇಕಾದ ಕೋವಿಡ್ ಮುನ್ನೆಚ್ಚರಿಕೆಯ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಬಿಡುಗಡೆ ಮಾಡಲಾಗಿದೆ.

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಧಾರವಾಡದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್. ಪುರುಷೋತ್ತಮ್ ಅವರು, 'ಆದ್ಯತೆ ಮೇರೆಗೆ ಹಾಸ್ಟೇಲ್‌ನಲ್ಲಿ ಮೊದಲಿಗೆ ಅವಕಾಶ ನೀಡಲು ಇಲಾಖೆಯ ಸಚಿವರು ಇತ್ತೀಚೆಗೆ ನಡೆಸಿದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಕಾರ್ಯಾಚರಣೆ ವಿಧಾನಗಳನ್ನು ಇಲಾಖೆ ಬಿಡುಗಡೆ ಮಾಡಿದೆ. ಅಂತಿಮ ವರ್ಷದಲ್ಲಿ ಓದುತ್ತಿರುವ, ದೂರದ ಊರುಗಳಿಂದ ಬರುವ ಹಾಗೂ ಆನ್‌ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದವರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

Edited By : Vijay Kumar
Kshetra Samachara

Kshetra Samachara

16/11/2020 07:12 am

Cinque Terre

48.65 K

Cinque Terre

2

ಸಂಬಂಧಿತ ಸುದ್ದಿ