ನವಲಗುಂದ : ಕಾರಣಾಂತರಗಳಿಂದ ನವಲಗುಂದ ತಾಲೂಕಿನ ಅನೇಕ ವಿದ್ಯಾರ್ಥಿಗಳು ಪದವಿ ಪ್ರವೇಶದಿಂದ ವಂಚಿತರಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪದವಿ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಭೀಮ್ ಆರ್ಮಿ ಸಂಘಟನೆ ವತಿಯಿಂದ ಗುರುವಾರ ಕರ್ನಾಟಕ ವಿಶ್ವ ವಿದ್ಯಾಲಯದ ಕುಲಪತಿಗಳಿಗೆ ಕುಲಸಚಿವರಿಗೆ ಹಾಗೂ ಸಿಂಡಿಕೇಟ್ ಸದಸ್ಯರಿಗೆ ಶಂಕರ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಕಸ್ತೂರಿ ಪಿ ಬಿಕ್ಕಣ್ಣವರ ಅವರ ಮೂಲಕ ಮನವಿಯನ್ನು ಸಲ್ಲಿಸಿದರು.
ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ಹಾಗೂ ಇತರೆ ಕಾರಣಗಳಿಂದ ವಿದ್ಯಾರ್ಥಿಗಳು ಪದವಿ ಪ್ರವೇಶ ಮಾಡಿಸಲು ಸಾಧ್ಯವಾಗಿಲ್ಲ ಎಂದು ನವಲಗುಂದ ತಾಲೂಕಿನ ವ್ಯಾಪ್ತಿಯ ಮಹಾವಿದ್ಯಾಲಯದಲ್ಲಿ ಮನವಿ ಮಾಡಿದ್ದು, ಅವರು ಈಗಾಗಲೇ ಪ್ರವೇಶದ ಅವಧಿ ಮುಗಿದಿದೆ, ವಿಶ್ವವಿದ್ಯಾಲಯದ ಅನುಮತಿಯಿಲ್ಲದೆ ಪ್ರವೇಶಾತಿ ನೀಡಲಾಗುವುದಿಲ್ಲಾ ಎಂದಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪದವಿ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಭೀಮ್ ಆರ್ಮಿ ಸಂಘಟನೆಯ ಸದಸ್ಯರು ಕರ್ನಾಟಕ ವಿಶ್ವ ವಿದ್ಯಾಲಯದ ಕುಲಪತಿಗಳಿಗೆ ಶಂಕರ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಕಸ್ತೂರಿ ಪಿ ಬಿಕ್ಕಣ್ಣವರ ಅವರ ಮೂಲಕ ಮನವಿಯನ್ನು ಸಲ್ಲಿಸಿದರು.
Kshetra Samachara
20/11/2020 08:30 pm