ಕುಂದಗೋಳ : ತಾಲೂಕಿನ ಸಂಶಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ ನಡೆಯಿತು.
ಸಭೆಯಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ಹಾಲಮ್ಮನವರ ಭಾಗವಹಿಸಿ ಮಾತನಾಡಿ, ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸಾಮಗ್ರಿಗಳು ಮತ್ತು ಅಗತ್ಯ ಬೇಡಿಕೆಗಳನ್ನು ಪಟ್ಟಿ ಮಾಡುವ ಮೂಲಕ ಕ್ರಿಯಾಯೋಜನೆ ರೂಪಿಸಿಲಾಗುವುದು. ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಪಿಡಿಒ ಎಸ್.ವಿ.ಕಾಯಕದ ಮಾತನಾಡಿ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಈಗಾಗಲೇ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಬೇಡಿಕೆಗನುಗುಣವಾಗಿ ಸ್ಪಂದಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಶಾಲೆಗಳ ಮುಖ್ಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾ.ಪಂ ಸಿಬ್ಬಂದಿ ಇದ್ದರು.
Kshetra Samachara
28/11/2020 08:38 am