ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಸತ್ಯಾಗ್ರಹ ಉಗ್ರ ಸ್ವರೂಪ ತಾಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು : ಮುಂಡರಗಿ ಮಠದ ನಿಜಗುಣಾನಂದ ಸ್ವಾಮೀಜಿ

ಧಾರವಾಡ : ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ನೌಕರರ ಹಾಗೂ ಆಡಳಿತ ಮಂಡಳಿ ಹೋರಾಟ ಸಮನ್ವಯ ಸಮಿತಿ, ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಸಂಘ ಸೇರಿ ಹಲವು ಸಂಘಗಳ ಬೆಂಬಲದೊಂದಿಗೆ ಡಿಸೆಂಬರ್ 15 ರವರೆಗೆ ಹಮ್ಮಿಕೊಂಡಿರುವ ಸರಣಿ‌ ಉಪವಾಸ ಸತ್ಯಾಗ್ರಹ ಇವತ್ತಿನ ಎರಡನೇ ದಿನಕ್ಕೆ ಕಾಲಿಟ್ಟಿದ್ದು,ಈ ಹೋರಾಟಕ್ಕೆ ಮುಂಡರಗಿಯ ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ ಸಾಥ್ ನೀಡಿದ್ದಾರೆ.

ನೂರಾರು ಶಿಕ್ಷಕರ ಸಮ್ಮುಖದಲ್ಲಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಸುದ್ದಿಗಾರಿಗೆ ಪ್ರತಿಕ್ರಿಯೆ ನೀಡಿದ ಅವರು,ಹೋರಾಟ ಉಗ್ರ ಸ್ವರೂಪ ಪಡೆಯೋದಕ್ಕೆ ಮುಂಚೆ ಸರಕಾರ ಸಮಸ್ಯೆಯನ್ನು ಬಗೆ ಹರಿಸಬೇಕು ಶಿಕ್ಷಕರ ಹೋರಾಟಕ್ಕೆ ಯಾವತ್ತೂ ನಮ್ಮ ಬೆಂಬಲ ಇದ್ದೇ ಇರುತ್ತೆ,ಸರಕಾರ ಸಮಸ್ಯೆಯನ್ನು ಆದಷ್ಟು ಬೇಗ ಹರಿಸಬೇಕು ಎಂದು ಅವರು ಹೇಳಿದರು.

Edited By : Manjunath H D
Kshetra Samachara

Kshetra Samachara

06/12/2020 06:56 pm

Cinque Terre

98.3 K

Cinque Terre

2

ಸಂಬಂಧಿತ ಸುದ್ದಿ