ಧಾರವಾಡ ; ಶಿಕ್ಷಣ ಕ್ಷೇತ್ರದ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ನೌಕರರ ಹಾಗೂ ಆಡಳಿತ ಮಂಡಳಿ ಹೋರಾಟ ಸಮನ್ವಯ ಸಮಿತಿ,ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಸಂಘ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊತಟ್ಟಿ ಅವರ ನೇತೃತ್ವದಲ್ಲಿ ಶುಕ್ರವಾರದಿಂದ ಆರಂಭಗೊಂಡ ನಿರತರ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಟ್ಟಿದೆ.
‘1995ರ ನಂತರ ಪ್ರಾರಂಭವಾದ ಎಲ್ಲ ವರ್ಗದ ಅರ್ಹ ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ಅನುದಾನ ನೀಡಬೇಕು.ಕಾಲ್ಪನಿಕ ವೇತನ ಸಮಿತಿ ವರದಿಯನ್ನು ಅನುಷ್ಠಾನಗೊಳಿಸಬೇಕು.ಹಳೇ ಪಿಂಚಣಿ ವ್ಯವಸ್ಥೆಯನ್ನೇ ಮುಂದು ವರಿಸಬೇಕು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಒತ್ತಾಯಿಸಿ ಡಿಸೆಂಬರ್15 ರವರೆಗೆ ಧರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
Kshetra Samachara
07/12/2020 03:27 pm