ಕಲಘಟಗಿ:ತಾಲೂಕಿನ ಯಲವದಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾವರಗೇರಿ ಶ್ರೀ ಕಲ್ಮೇಶ್ವರ ಪ್ರೌಢ ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳೆಂದು ಘೋಷಿಸಲಾಯಿತು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ತಾಲೂಕಾ ಆರೋಗ್ಯ ಇಲಾಖೆ, ಆರಕ್ಷಕ ಇಲಾಖೆ ಸಹಭಾಗಿತ್ವದಲ್ಲಿ ಶಾಲೆಗಳನ್ನು ಗುರುತಿಸಿ
ತಂಬಾಕು ಮುಕ್ತ ಶಾಲೆಗಳೆಂದು ಘೋಷಣೆ ಮಾಡಿ ನಾಮಫಲಕ ಅಂಟಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ಸಲಹೆಗಾರರು ಎಮ್.ಐ.ಕಲ್ಲಪ್ಪನವರ, ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕ ಹೇಮರಡ್ಡಿ.ಎಸ್.ಎಸ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಚೌವಾಣ್ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
12/12/2020 09:56 am